×
Ad

ಆಸ್ತಿ ಮುಟ್ಟುಗೋಲು ಪ್ರಶ್ನಿಸಿದ್ದ ತೆಲಗಿ ಅರ್ಜಿ ವಜಾ

Update: 2017-07-12 21:31 IST

ಬೆಂಗಳೂರು, ಜು.12: ನಕಲಿ ಕಾಗದ ಹಗರಣ ನಡೆಸಿದ ಹಿನ್ನೆಲೆಯಲ್ಲಿ ತನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡ ಸಿಬಿಐ ಕ್ರಮ ರದ್ದುಕೋರಿ ಅಬ್ದುಲ್ ಕರೀಂಲಾಲ್ ತೆಲಗಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಅಬ್ದುಲ್ ಕರೀಂಲಾಲ್ ತೆಲಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳೀಮಠ ಮತ್ತು ನ್ಯಾಯಮೂರ್ತಿ ಮೈಕಲ್ ಕುನ್ಹ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಅಬ್ದುಲ್ ಕರೀಂಲಾಲ್ ತೆಲಗಿ ಅವರ ಆಸ್ತಿಯನ್ನು ಸಿಬಿಐ ಮುಟ್ಟುಗೋಲು ಹಾಕಿಕೊಂಡಿದೆ. ಹೀಗಾಗಿ, ಸಿಬಿಐ ಕ್ರಮವನ್ನು ರದ್ದುಪಡಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಸಿಬಿಐ ಪರ ವಾದಿಸಿದ ವಕೀಲರು, ಕರೀಂಲಾಲ್ ಮೇಲೆ ಇನ್ನೂ ಹಲವು ಪ್ರಕರಣಗಳು ಬಾಕಿಯಿವೆ. ಹೀಗಾಗಿ, ಕರೀಂಲಾಲ್ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು ಕರೀಂಲಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News