ಸಾಲಬಾಧೆ: ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಹಾವೇರಿ, ಜು. 13: ಸಾಲಬಾಧೆಯಿಂದ ಮನನೊಂದು ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಕ್ಕಳ ಮುಂದೆಯೇ ರಿವಾಲ್ವಾರ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ದಾರುಣ ಘಟನೆ ಜಿಲ್ಲೆಯ ರಾಣೆಬೆನ್ನೂರು ಪೊಲೀಸ್ ಠಾಣಾ ವಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಇಲ್ಲಿನ ರಾಣೆಬೆನ್ನೂರು ಬಸ್ ನಿಲ್ದಾಣದ ಹಿಂಭಾಗದ ಮನೆಯೊಂದರ ನಿವಾಸಿ ದೊಡ್ಡ ಕೊಟ್ರೇಶ ಸೊಪ್ಪಿನಬಾವಿಮಠ (46) ಎಂದು ಗುರುತಿಸಲಾಗಿದೆ. ಕೊಟ್ರೇಶ್ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಕೊಟ್ರೇಶ್ ಅವರು ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದು, ಆ ಹಿನ್ನೆಲೆಯಲ್ಲಿ ಬೇಸತ್ತು ಸಾವಿಗೆ ಶರಣಾಗಿದ್ದಾನೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು ಠಾಣಾ ಪಿಎಸ್ಸೈ ಸಿದ್ದಾರೂಢ ಬಡಿಗೇರ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಇಲ್ಲಿನ ರಾಣೆಬೆನ್ನೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ರಾಣೆಬೆನ್ನೂರು ನಗರ ಠಾಣಾ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.