×
Ad

ಉದ್ಯೋಗ ಮೇಳ

Update: 2017-07-13 18:46 IST

ಚಿಕ್ಕಮಗಳೂರು, ಜು.13: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಐಡಿಎಸ್‌ಜಿ ಕಾಲೇಜ್ ಸಹಯೋಗದೊಂದಿಗೆ ನಗರದ ಐ.ಡಿ.ಎಸ್.ಜಿ ಕಾಲೇಜ್ ಸಭಾಂಗಣದಲ್ಲಿ ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಜು.15 ರಂದು ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳ ಏರ್ಪಡಿಸಲಾಗಿದೆ.  

ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮ., ಐಟಿಐ ಹಾಗೂ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಬೆಂಗಳೂರು, ಹಾಸನ ಕಡೆಗಳಿಂದ ಕಂಪನಿಗಳು ಭಾಗವಹಿಸುತ್ತಿದೆ. ಈ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸಲು ಆಸಕ್ತರಿರುವ ಅಭ್ಯರ್ಥಿಗಳು ತಮ್ಮ ಎಲ್ಲಾ ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡಿನ ನಕಲು, ಇ-ಮೇಲ್ ವಿಳಾಸ ಮೊಬೈಲ್ ಸಂಖ್ಯೆ ಹಾಗೂ ವಿವರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ: 08262-235513 ನ್ನು ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News