ಉಚ್ಚಿಲ: ಟೆಂಪೊ-ಕಾರು ಢಿಕ್ಕಿ; ಓರ್ವನಿಗೆ ಗಾಯ

Update: 2017-07-13 15:30 GMT

ಉಳ್ಳಾಲ, ಜು. 13: ತಲಪಾಡಿ ಸಮೀಪದ ಉಚ್ಚಿಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೊ ಮತ್ತು ಕಾರು ಢಿಕ್ಕಿ ಹೊಡೆದು ಓರ್ವ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ಕೇರಳದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಉಚ್ಚಿಲ ಸಮೀಪಿಸಿದಾಗ ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಡಿವೈಡರ್‌ನಿಂದ ಜಂಪ್‌ ಹೊಡೆದಿದ್ದು, ಈ ಸಂದರ್ಭದಲ್ಲಿ ಮಂಗಳೂರಿನಿಂದ ತಲಪಾಡಿಯತ್ತ ತೆರಳುತ್ತಿದ್ದ ಟೆಂಪೊ ಢಿಕ್ಕಿ ಹೊಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ನಾಲ್ವರ ಪೈಕಿ ಓರ್ವನಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News