ಪೊಲೀಸ್ ಮಹಾ ನಿರ್ದೇಶಕರು ಮಂಗಳೂರಿಗೆ ಭೇಟಿ
Update: 2017-07-13 21:02 IST
ಮಂಗಳೂರು, ಜು.13: ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆರ್.ಕೆ.ದತ್ತ ಗುರುವಾರ ಸಂಜೆ ನಗರಕ್ಕೆ ಭೇಟಿ ನೀಡಿದರು.
ಬಂಟ್ವಾಳ ತಾಲೂಕಿನಲ್ಲಿ ಇತ್ತೀಚೆಗೆ ನಡೆದಿರುವ ಕೆಲವು ಅಹಿಕರ ಘಟನೆಗಳ ಹಿನ್ನೆಲೆಯಲ್ಲಿ ಅವರು ನಗರಕ್ಕೆ ಆಗಮಿಸಿ, ಹಿರಿಯ ಪೊಲೀಸ್ ಅಧಿಕಾರಿ ಗಳೊಂದಿಗೆ ಸಮಾಲೋಚನೆ ನಡೆಸಿದರು.
ಗುಪ್ತಚರ ಇಲಾಖೆಯ ಎಡಿಜಿಪಿ ಅಮೃತ್‌ಪಾಲ್, ಪಶ್ಚಿಮ ವಲಯ ಐಜಿಪಿ ಹರಿಶೇಖರನ್, ಎಸ್ಪಿ ಸುಧೀರ್ ರೆಡ್ಡಿ, ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಸಹಿತ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.