ಕಾರಾಗೃಹ ಅವ್ಯವಹಾರ ಆರೋಪ: ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಆದೇಶ
Update: 2017-07-13 21:05 IST
ಬೆಂಗಳೂರು, ಜು. 13: ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಸಂಬಂಧ ಉನ್ನತ ಮಟ್ಟದ ವಿಚಾರಣೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾರಾಗೃಹದಲ್ಲಿ ಬಂಧಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಮತ್ತು ನಕಲಿ ಛಾಪಾ ಕಾಗದದ ಆರೋಪಿ ಖರೀಂ ಲಾಲ್ ತೆಲಗಿಗೆ ವಿಶೇಷ ಆತಿಥ್ಯ ನೀಡಲು ಕಾರಾಗೃಹದ ಡಿಐಜಿ ಸತ್ಯನಾರಾಯಣ ರಾವ್ 2ಕೋಟಿ ರೂ.ಲಂಚ ಪಡೆದಿದ್ದಾರೆಂದು ಡಿಐಜಿ ರೂಪಾ ಮಾಡಿರುವ ಆರೋಪದ ಸತ್ಯಾಸತ್ಯತೆ ಪರಿಶೀಲಿಸಲು ತನಿಖೆಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ತ್ವರಿತಗತಿ ತನಿಖೆ ನಡೆಸಿ ಶೀಘ್ರದಲ್ಲೆ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.