​ನಾರೀಶಕ್ತಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Update: 2017-07-13 16:35 GMT

ಉಡುಪಿ, ಜು.13: 2018 ಮಾ.8ರಂದು ನಡೆಯುವ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಕೇಂದ್ರ ಸರಕಾರ ಪ್ರದಾನ ಮಾಡುವ ನಾರೀ ಶಕ್ತಿ ಪುರಸ್ಕಾರಗಳಿಗೆ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಪ್ರಸ್ತಾವನೆಗಳ್ನು ಆಹ್ವಾನಿಸಲಾಗಿದೆ.
  ಕೇಂದ್ರ ಸರಕಾರದ ಮಾರ್ಗ ಸೂಚಿಯಂತೆ 1. ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ವಿಶೇಷವಾಗಿ ಬೇಟಿ ಬಚಾವೋ, ಬೇಟಿ ಪಡಾವೋ ಕ್ಷೇತ್ರದಲ್ಲಿ ಕೆಲಸ ಮಾಡಿರುವ ವ್ಯಕ್ತಿಗಳು, ಜಿಪಂ, ಗ್ರಾಪಂಗಳಿಗೆ ರಾಣಿ ರುದ್ರಮ್ಮ ದೇವಿ ಪ್ರಶಸ್ತಿ, 2. ಮಹಿಳೆಯರಿಗೆ ಉತ್ತಮ ಸೌಕರ್ಯ, ಸೇವೆಯನ್ನು ಒದಗಿಸುವಲ್ಲಿ ಶ್ರಮಿಸಿದ ಅತ್ಯುತ್ತಮ ಸ್ಥಳೀಯ ಸಂಸ್ಥೆಗಳಿಗೆ ಮಾತಾ ಜೀಜಾ ಬಾಯಿ ಪ್ರಶಸ್ತಿ ಹಾಗೂ 3. ಲಿಂಗಾನುಪಾತವನ್ನು ಉತ್ತಮಪಡಿಸಲು ಶ್ರಮಿಸಿದ ವ್ಯಕ್ತಿ ಹಾಗೂ ಖಾಸಗಿ ಸಂಘ ಸಂಸ್ಥೆಗಳಿಗೆ/ಸಾರ್ವಜನಿಕ ಸಂಸ್ಥೆಗಳಿಗೆ ದೇವಿ ಅಹಲ್ಯಾಬಾಯಿ ಹೋಳ್ಕರ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.

ಪ್ರಶಸ್ತಿ ಪ್ರಸ್ತಾವನೆಗಳನ್ನು ಕೇಂದ್ರ ಸರಕಾರದ ಮಾರ್ಗ ಸೂಚಿಯಲ್ಲಿ ತಿಳಿಸಿದಂತೆ, ರಾಣಿ ರುದ್ರಮ್ಮ ದೇವಿ ಪ್ರಶಸ್ತಿಯನ್ನು ಪಂಚಾಯತ್‌ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ, ಮಾತಾ ಜೀಜಾಬಾಯಿ ಪ್ರಶಸ್ತಿಯನ್ನು ನಗರಾಭಿವೃದ್ಧಿ ಇಲಾಖೆಯ ಮೂಲಕ ಹಾಗೂ ದೇವಿ ಅಹಲ್ಯಬಾಯಿ ಹೋಳ್ಕರ್ ಪ್ರಶಸ್ತಿಯನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗಳ ಮೂಲಕ ಸೂಕ್ತ ಶಿಪಾರಸ್ಸಿನೊಂದಿಗೆ ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಜು.31ರೊಳಗೆ ಸಲ್ಲಿಸಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ-204, ಮೊದಲನೇ ಮಹಡಿ, ರಜತಾದ್ರಿ, ಬಿ ಬ್ಲಾಕ್ ಮಣಿಪಾಲ (ದೂರವಾಣಿ: 0820-2574972) ಇವರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News