ಬೃಹತ್ ನೇತ್ರದಾನ ಶಿಬಿರ
Update: 2017-07-13 23:22 IST
ಮಂಗಳೂರು, ಜು.13: ದೇಶದಲ್ಲಿ ಅಂಧತ್ವದಿಂದ ಬಳಲುತ್ತಿರುವ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಜು.15ರಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಬೃಹತ್ ನೇತ್ರದಾನ ಶಿಬರ ನಡೆಯಲಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ ಅವರ ಸಮ್ಮಖದಲ್ಲಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿ ಮತ್ತು ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಯವರ ನೇತೃತ್ವದಲ್ಲಿ ನೇತ್ರದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ/ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ, ದ.ಕ. ಮಂಗಳೂರು ಇವರ ಪ್ರಕಟನೆ ತಿಳಿಸಿದೆ.