ಶಾಂತಿ ಕಾಪಾಡಲು ಖಾಝಿಗಳಿಂದ ಮನವಿ
Update: 2017-07-13 23:59 IST
ಮಂಗಳೂರು, ಜು. 13: ದ.ಕ. ಜಿಲ್ಲೆಯ ಕೆಲವು ಕಡೆಗಳಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಕಳವಳಕಾರಿಯಾಗಿದೆ. ಕೆಲವೇ ಕೆಲವು ಸಮಾಜಘಾತುಕ ಶಕ್ತಿಗಳ ಕೆಟ್ಟ ಚಿಂತನೆಯಿಂದ ಸವಾಜವೇ ಆತಂಕಕ್ಕೀಡಾಗಿದೆ. ದುಷ್ಕರ್ಮಿಗಳ ವಿರುದ್ಧ ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಜಿಲ್ಲೆಯ ಎಲ್ಲಾ ನಾಗರಿಕರು ಶಾಂತಿ ಕಾಪಾಡಲು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಖಾಝಿಗಳಾದ ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಹಾಗೂ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದ್ದಾರೆ.
ಜು. 14ರಂದು ಜುಮಾ ನಮಾಝ್ ನಂತರ ಪ್ರವಾದಿ ಮುಹಮ್ಮದ್ (ಸ.ಅ.) ಅವರ ಸಹೋದರತೆಯ ಸಂದೇಶವನ್ನು ಸಾರಬೇಕು ಹಾಗೂ ಶಾಂತಿಗಾಗಿ ವಿಶೇಷ ಪ್ರಾರ್ಥನೆ ಮಾಡಬೇಕೆಂದು ಅವರು ತಿಳಿಸಿದ್ದಾರೆ.