×
Ad

ಎಲ್ಲರಿಗೂ ಗೋಮಾಂಸ ತಿನ್ನುವ ಹಕ್ಕಿದೆ: ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ

Update: 2017-07-14 19:00 IST

ಮುಂಬೈ, ಜು.14: ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸೆಯನ್ನು ಖಂಡಿಸಿರುವ ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ, ಎಲ್ಲರಿಗೂ ಗೋಮಾಂಸ ತಿನ್ನುವ ಹಕ್ಕಿದೆ ಎಂದಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಪ್ಪು ಸಂಭವಿಸಿದರೆ ಪೊಲೀಸರ ಬಳಿ ತೆರಳಲು ಹಾಗೂ ನ್ಯಾಯಾಂಗದ ಮೊರೆ ಹೋಗಲು ಪ್ರತಿಯೊಬ್ಬರಿಗೂ ಹಕ್ಕಿದೆ. ಆದರೆ ಕಾನೂನಿಗೆ ಸವಾಲೊಡ್ಡಲು ಯಾರಿಗೂ ಹಕ್ಕಿಲ್ಲ. ಈ ಗೋರಕ್ಷಕರಿಗೆ ಶಿಕ್ಷೆಯಾಗಬೇಕು ಎಂದರು.

ಎಲ್ಲರಿಗೂ ಗೋಮಾಂಸ ತಿನ್ನುವ ಹಕ್ಕಿದೆ. ಗೋರಕ್ಷಣೆಯ ಹೆಸರಿನಲ್ಲಿ ಯಾರೂ ಕಾನೂನನ್ನು ಉಲ್ಲಂಘಿಸಬಾರದು ಎಂದವರು ಇದೇ ಸಂದರ್ಭ ಹೇಳಿದ್ದಾರೆ.

ನಾಗ್ಪುರದ ಭರ್ಸಿಂಗಿಯಲ್ಲಿ ಗೋಮಾಂಸ ಸಾಗಾಟ ಆರೋಪದಲ್ಲಿ ವ್ಯಕ್ತಿಯೋರ್ವನ ಮೇಲೆ ಗೋರಕ್ಷಕರು ಮಾರಣಾಂತಿಕ ಹಲ್ಲೆ ನಡೆಸಿದ ಅನಂತರ ಸಚಿವರು ಈ ಹೇಳಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News