ನೂತನ ಡಿಸಿಗೆ ಜಿಲ್ಲಾ ಪತ್ರಕರ್ತ ಸಂಘದಿಂದ ಸ್ವಾಗತ
Update: 2017-07-14 19:57 IST
ಹಾಸನ, ಜು.14: ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಸನಕ್ಕೆ ಬಂದು ಅಧಿಕಾರಿ ಸ್ವೀಕರಿಸಿದ ನಂತರ ಭಾರತೀಯ ಪತ್ರಕರ್ತರ ಒಕ್ಕೂಟದ ಮಹಾ ಪ್ರಧಾನ ಕಾರ್ಯದರ್ಶಿ ಹೆಚ್.ಬಿ. ಮದನ್‌ಗೌಡ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರವಿನಾಕಲಗೂಡು ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಎಲ್ಲಾ ಪತ್ರಕರ್ತರು ಆತ್ಮೀಯವಾಗಿ ಸ್ವಾಗತಿಸಿದರು.
ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ಜಿಲ್ಲಾ ಪತ್ರಕರ್ತರ ಸಂಘವು ಸಂಪೂರ್ಣ ಸಹಕಾರ ನೀಡುವುದಾಗಿ ಇದೆ ವೇಳೆ ತಿಳಿಸಿದರು.