​ಉಡುಪಿ: ವಾರ್ತಾ ಇಲಾಖೆಗೆ ನೂತನ ಬಸ್

Update: 2017-07-14 16:21 GMT

ಉಡುಪಿ, ಜು.14: ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾ ವಾರ್ತಾ ಇಲಾಖೆಗೆ ಒದಗಿಸಲಾದ ನೂತನ ಬಸ್ಸನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಇಂದು ಮಣಿಪಾಲದಲ್ಲಿ ಜನಸಂಪರ್ಕ ಸಭೆಗೆ ಮುನ್ನ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ನಗರಸಭಾ ಸದಸ್ಯ ರಾದ ಜನಾರ್ಧನ ಬಂಡಾರ್ಕರ್, ಗಣೇಶ್ ನೇರ್ಗಿ, ನಾರಾಯಣ ಕುಂದರ್, ತಹಶೀಲ್ದಾರ್ ಮಹೇಶ್ಚಂದ್ರ, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಜನಾರ್ಧನ್, ನಗರಸಭೆ ಪೌರಾಯುಕ್ತ ಡಿ. ಮಂಜುನಾಥಯ್ಯ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News