ಕೆರೆಗೆ ಬಿದ್ದು ಮೃತ್ಯು
Update: 2017-07-14 23:02 IST
ಮಂಗಳೂರು, ಜು.14: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕರಂಬಾರು ಎಂಬಲ್ಲಿ ವ್ಯಕ್ತಿಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಕರಂಬಾರಿನ ಶರತ್ ಶೆಟ್ಟಿ ಮೃತಪಟ್ಟ ವ್ಯಕ್ತಿ. ಕೆಲವು ದಿನದಿಂದ ಮಾನಸಿಕವಾಗಿ ಅಸ್ವಸ್ಥರಾಗಿದ್ದ ಇವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಕೊನೆಯುಸಿರೆಳೆದರು ಎನ್ನಲಾಗಿದೆ.
ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಇವರು ಇಂದು ಬೆಳಗ್ಗಿನಿಂದ ಕಾಣೆಯಾಗಿದ್ದು, ಹುಡುಕಾಡಿದಾಗ ಕೆರೆಯಲ್ಲಿ ಮೃತದೇಹ ಪತ್ತೆಯಾಯಿತು ಎಂದು ಪ್ರಕರಣ ದಾಖಲಿಸಿಕೊಂಡಿರುವ ಬಜ್ಪೆ ಪೊಲೀಸರು ತಿಳಿಸಿದ್ದಾರೆ.