×
Ad

ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Update: 2017-07-14 23:14 IST

ಮಂಗಳೂರು, ಜು.14: ಆರ್‌ಟಿಐ ಕಾರ್ಯಕರ್ತ ವಿನಾಯಕ ಪಿ. ಬಾಳಿಗಾ ಅವರನ್ನು 2016ರ ಮಾ.21ರಂದು ನಗರದಲ್ಲಿ ಹತೈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನರೇಶ್ ಶೆಣೈಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಒಂದು ವೇಳೆ ಆರೋಪಿ ಹೈಕೋರ್ಟ್ ವಿಧಿಸಿರುವ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದುಪಡಿಸಲು ಹೈಕೋರ್ಟ್‌ಗೆ ಮೊರೆ ಹೋಗಬಹುದು ಎಂದು ಹೇಳಿದೆ.

ಈ ಪ್ರಕಣದಲ್ಲಿ ಹೈಕೋರ್ಟ್ ಆರೋಪಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ವಿನಾಯಕ ಬಾಳಿಗಾರ ತಂದೆ ರಾಮಚಂದ್ರ ಬಾಳಿಗಾ, ನರೇಶ್ ಶೆಣೈ ಬಿಡುಗಡೆಗೊಂಡಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿರುವುದರಿಂದ ಆತನ ಜಾಮೀನನ್ನು ರದ್ದುಗೊಳಿಸಬೇಕು ಎಂದು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಮಾಡಿದ್ದರು.

ನ್ಯಾ.ಆದರ್ಶ ಕುಮಾರ್ ಗೋಯೆಲ್ ಮತ್ತು ನ್ಯಾ. ಉದಯ್ ಲಲಿತ್ ದ್ವಿಸದಸ್ಯ ಪೀಠ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಆರೋಪಿಗೆ ಜಾಮೀನು ನೀಡಿ 10 ತಿಂಗಳಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಯಾವುದೇ ನಿದರ್ಶನ ಕಾಣುತ್ತಿಲ್ಲ ಎಂದು ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News