ಜು.15: ಸ್ವಯಂಪ್ರೇರಿತ ರಕ್ತದಾನ ಶಿಬಿರ
ಉಡುಪಿ, ಜು.14: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಉಡುಪಿ, ಜಿಲ್ಲಾ ಎಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ, ಕರಾವಳಿ ಸ್ವಯಂ ಪ್ರೇರಿತ ರಕ್ತದಾನಿಗಳ ಸಂಘ ಗಂಗೊಳ್ಳಿ, ಲಯನ್ಸ್ ಕ್ಲಬ್ ಉಡುಪಿ ಮಿಡ್‌ಟೌನ್, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು, ಯುವ ರೆಡ್‌ಕ್ರಾಸ್ ಘಟಕ, ಸರಕಾರಿ ಪಾಲಿಟೆಕ್ನಿಕ್ ಉಡುಪಿ, ಸ್ನೇಹ ಟುಟೋರಿಯಲ್ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ರಕ್ತದಾನಿಗಳ ದಿನ’ದ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಾಳೆ ಜು.15ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹಣ್ಯ ಶೇರೆಗಾರ್ ವಹಿಸುವರು. ಉಡುಪಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾಕುಮಾರಿ ರಕ್ತದಾನ ಮತ್ತು ಸುರಕ್ಷಿತ ರಕ್ತದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿರುವರು ಎಂದು ಪ್ರಕಟಣೆ ತಿಳಿಸಿದೆ.