ರಾಜ್ಯ ‘ಕೈ ‘ ಪಾಳಯದಲ್ಲಿ ಭುಗಿಲೆದ್ದ ಭಿನ್ನಮತ

Update: 2017-07-15 06:45 GMT

ಬೆಂಗಳೂರು, ಜು.15: ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪದಾಧಿಕಾರಿಗಳ ನೇಮಕದ ವಿಚಾರದಲ್ಲಿ ಸಂಸದರು ಮತ್ತು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪದಾಧಿಕಾರಿಗಳ ನೇಮಕದಲ್ಲಿ ಸಾಮಾಜಿಕ ನ್ಯಾಯ ಕಾಪಾಡಿಲ್ಲ ಎಂದು ಹೇಳಿರುವ  ಸಂಸದ ಕೆ.ಎಚ್ ಮುನಿಯಪ್ಪ ಈ ಸಂಬಂಧ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೂರು ಸಲ್ಲಿಸುವ ನಿರ್ಧಾರ ಕೈಗೊಂಡಿದ್ದಾರೆ.

ಎರಡು ದಿನಗಳ ಹಿಂದೆ ಪ್ರಕಟಗೊಂಡ ಕೆಪಿಸಿಸಿ 170 ಮಂದಿ ಪದಾಧಿಕಾರಿಗಳ ಪಟ್ಟಿಯಲ್ಲಿ 100 ಮಂದಿ ಬೆಂಗಳೂರಿನವರು. ರಾಜ್ಯದ  ಇತರ ಜಿಲ್ಲೆಗಳ 70 ಮಂದಿ ಕಾಂಗ್ರೆಸ್ ಧುರೀಣರಿಗೆ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ  ನೀಡಲಾಗಿದೆ. ಪದಾಧಿಕಾರಿಗಳ ಪಟ್ಟಿಯಲ್ಲಿ ಶಾಸಕರನ್ನು ಕಡೆಗಣಿಸಲಾಗಿದೆ. ವಿಧಾನ ಪರಿಷತ್ ಸದಸ್ಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಸಂಸದ ಕೆಎಚ್ ಮುನಿಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸಂಘಟನೆಗೆ ಶಾಸಕರ ಅಗತ್ಯವಿಲ್ಲವೇ ಎಂದು ಶಾಸಕರು ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News