×
Ad

ಅಂಗನವಾಡಿ ಕಾರ್ಯಕರ್ತೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಸರಕಾರ ಬದ್ಧ: ಎಸ್.ಎಸ್. ಮಲ್ಲಿಕಾರ್ಜುನ್

Update: 2017-07-15 18:40 IST

ದಾವಣಗೆರೆ, ಜು.15: ಅಂಗನವಾಡಿ ಕಾರ್ಯಕರ್ತೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.

ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ದಾವಣಗೆರೆ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಎಐಟಿಯುಸಿ ಫೆಡರೇಷನ್ ವತಿಯಿಂದ ಹಮ್ಮಿಕೊಂಡಿದ್ದ ಸಚಿವರಿಗೆ ಸನ್ಮಾನ ಸಮಾರಂಭ ಹಾಗೂ ಸಂಘಟನೆಯ ಹೋರಾಟದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. 6 ಸಾವಿರದಿಂದ 8 ಸಾವಿರಕ್ಕೆ ವೇತನ ಏರಿಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗಾಗಿ 126 ಆಶ್ರಯ ಮನೆಗಳನ್ನು ಸಹ ನೀಡಲಾಗಿದೆ. ಇದನ್ನೆಲ್ಲಾ ಅರಿತು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ನಿಮ್ಮ ಶ್ರೇಯಸ್ಸನ್ನು ಬಯಸುವ ಕಾಂಗ್ರೆಸ್ ಪಕ್ಷವನ್ನು ಮುಂದಿನ ಬಾರಿಯೂ ಅಧಿಕಾರಕ್ಕೆ ಬರುವಂತೆ ಕೈಜೋಡಿಸಬೇಕೆಂದರು.

ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ಬಿಜೆಪಿ, ಜೆಡಿಎಸ್ ಪಕ್ಷಗಳು ಕೇವಲ ಬೂಟಾಟಿಕೆ ಮಾಡುತ್ತಾ ಕಾಲಕಳೆಯುತ್ತಿವೆ. ಅವರಿಗೆ ಬುದ್ದಿ ಕಲಿಸಲು ಎಲ್ಲರೂ ಒಮ್ಮನಸಿನಿಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಣತೊಡಬೇಕು ಎಂದು ಮನವಿ ಮಾಡಿದರು.

     

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News