×
Ad

ಪಾಕ್‌ನಿಂದ ಅಪ್ರಚೋದಿತ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮ

Update: 2017-07-15 19:30 IST

 ಶ್ರೀನಗರ,ಜು.15: ಜಮ್ಮು-ಕಾಶ್ಮೀರದ ರಾಜೌರಿ ವಿಭಾಗದಲ್ಲಿನ ಭಾರತೀಯ ಸೇನಾ ನೆಲೆಗಳ ಮೇಲೆ ಶನಿವಾರ ಮಧ್ಯಾಹ್ನ ಪಾಕಿಸ್ತಾನಿ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಸಾವನ್ನಪ್ಪಿದ್ದಾನೆ.

ಮಧ್ಯಾಹ್ನ 1:30ರ ಸುಮಾರಿಗೆ ಪಾಕಿಗಳು ಗುಂಡು ಹಾರಿಸಿದ್ದು, ಭಾರತೀಯ ಯೋಧರು ಪ್ರತಿದಾಳಿ ನಡೆಸಿದ್ದರು. ಗುಂಡಿನ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಲಾನ್ಸ್ ನಾಯ್ಕ್ ಮುಹಮ್ಮದ ನಸೀರ್(35) ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಬೆಳಿಗ್ಗೆ ದ.ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ನ ಗಸ್ತು ತಂಡದ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು, ಓರ್ವ ಅಧಿಕಾರಿ ಗಾಯಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News