ಹೊಟೇಲ್ ಉದ್ಯಮದಲ್ಲಿ ಕಾಲಕ್ಕೆ ಅನುಗುಣವಾಗಿ ಬದಲಾವಣೆ ಅಗತ್ಯ: ಪ್ರಮೋದ್ ಮಧ್ವರಾಜ್
ಉಡುಪಿ, ಜು.16: ಇಂದಿನ ಕಾಲದ ಆಧುನಿಕ ಜೀವನ ಶೈಲಿಯಲ್ಲಿ ಹೊಟೇಲ್ ಆಹಾರಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ಹೊಟೇಲ್ ಉದ್ಯಮದಲ್ಲಿ ಕಾಲಕ್ಕೆ ಅನುಗುಣವಾಗಿ ಆಹಾರ ಪದ್ಧತಿಗಳಲ್ಲಿ ಅಭಿವೃದ್ಧಿ ಮಾಡಬೇಕಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಹೋಟಲ್ ಉದ್ದಿಮೆದಾರರ ಸಹಾಕಾರ ಸಂಘವನ್ನು ರವಿವಾರ ಉಡುಪಿ ಕಿದಿಯೂರು ಹೊಟೇಲಿನ ಮಾಧವಾ ಕೃಷ್ಣ ಸಭಾಂಗದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಇಂದು ಹೊಟೇಲ್ ಉದ್ಯಮ ವಿಸ್ತಾರವಾಗಿ ಬೆಳೆಯುತ್ತಿದೆ. ಆಹಾರ ಪದ್ಧತಿಗಳಲ್ಲಿ ಹೊಸತನವನ್ನು ಆಳವಡಿಸಿಕೊಳ್ಳುವುದರ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರನ್ನು ಸೆಳೆಯವ ಮೂಲಕ ಉತ್ತಮವಾದ ಲಾಭ ಪಡೆಯಬಹುದು. ಬೆಳೆಯುತ್ತಿರುವ ಆಧುನಿಕತೆ ಮತ್ತು ಉದ್ಯಮಕ್ಕೆ ಈ ಸಹಕಾರ ಸಂಘ ಸಹಕಾರಿಯಾಗಿದೆ ಎಂದರು.
ಮಾಜಿ ಶಾಸಕ ಕೆ.ರಘುಪತಿ ಭಟ್, ಉಡುಪಿ ನಗರ ಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಕರ್ನಾಟಕ ಪ್ರದೇಶ ಹೋಟೆಲ್ ಉಪಹಾರ ಮಂದಿರ ಅಧ್ಯಕ್ಷ ಎಂ.ರಾಜೇಂದ್ರ, ಉಪಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಕಾರ್ಯದರ್ಶಿ ಮಧುಕರ್ ಶೆಟ್ಟಿ, ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಸಹಕಾರಿ ಸಂಘ ಉಪನಿಬಂಧಕ ಪ್ರವೀಣ್ ನಾಯಕ್ ಮುಖ್ಯ ಅತಿಥಿಗಳಾಗಿ ದ್ದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಉಪಾಧ್ಯಕ್ಷ ಕೆ.ನಾಗೇಶ್ ಭಟ್, ಲಕ್ಷ್ಮಣ ನಾಯಕ್, ಪ್ರಫುಲ್ಲಾ, ಎಸ್.ಗಿರಿಜಾ, ಸುನೀಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.