ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ
Update: 2017-07-16 17:43 IST
ಉಡುಪಿ, ಜು.16: ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಘಟಕವನ್ನು ಉದ್ಘಾಟಿಸಿದರು. ರಾಜ್ಯ ಶಾಖೆಯು ಈಗಾಗಲೇ ಮುದ್ರಿಸಿರುವ ಯುವ ರೆಡ್‌ಕ್ರಾಸ್ ಕೈಪಿಡಿಯನ್ನು ಕಾಲೇಜಿನ ಘಟಕಕ್ಕೆ ಇದೇ ಂದರ್ಭದಲ್ಲಿ ಹಸ್ತಾಂತರಿಸಲಾಯಿತು.
ಮುಖ್ಯ ಅತಿಥಿಗಳಾಗಿ ರೆಡ್‌ಕ್ರಾಸ್ ಸಂಸ್ಥೆಯ ಉಡುಪಿಯ ಸಭಾಪತಿ ಡಾ.ಉಮೇಶ್ ಪ್ರಭು ಸಂಸ್ಥೆಯ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಜಗದೀಶ್ ರಾವ್ ವಹಿಸಿದ್ದರು. ಯುವ ರೆಡ್‌ಕ್ರಾಸ್ ಸಂಯೋಜಕಿ ಶೋಭಾ ಸ್ವಾಗತಿಸಿದರು. ತೇಜಸ್ವಿನಿ ವಂದಿಸಿದರು. ಶ್ರುತಿ ಕಾರ್ಯಕ್ರಮ ನಿರೂಪಿಸಿದರು.