ಎನ್ನೆಸ್ಸೆಸ್ ಕಾರ್ಯಕ್ರಮಗಳ ಉದ್ಘಾಟನೆ
Update: 2017-07-16 17:45 IST
ಉಡುಪಿ, ಜು.16: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2017-18ನೆ ಸಾಲಿನ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ಜರಗಿತು.
ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಜೆರಾಲ್ದ್ ಪಿಂಟೋ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವಾ ಅಧ್ಯಕ್ಷತೆಯನ್ನು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಧಿಕಾರಿಗಳಾದ ರವಿನಂದನ್ ಹಾಗೂ ಅನುಪಮಾ ಉಪಸ್ಥಿತರಿದ್ದರು. ಸುಶ್ಮಿತಾ ಸ್ವಾಗತಿಸಿದರು. ದೀಪಿಕಾ ವಂದಿಸಿದರು. ಯಶೋಧಾ ಕಾರ್ಯಕ್ರಮ ನಿರೂಪಿಸಿದರು.