ಶರತ್ ಮನೆಗೆ ಐವನ್‌ ಭೇಟಿ

Update: 2017-07-16 13:45 GMT

ಮಂಗಳೂರು, ಜು. 16: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರೆಸೆಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಮನೆಗೆ ಸರಕಾರದ ಮುಖ್ಯ ಸಚೇತಕ ಐವನ್ ಡಿಸೋಜಾ ಅವರು ಭೇಟಿ ನೀಡಿದರು.

  ಈ ಸಂದರ್ಭದಲ್ಲಿ ಶರತ್ ಮಡಿವಾಳ ಅವರ ತಂದೆ ತನಿಯಪ್ಪ ಮಡಿವಾಳ ಅವರಿಗೆ ಸಾಂತ್ವನ ಹೇಳಿದರು. ಕೊಲೆ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಐವನ್ ಡಿಸೋಜಾ ತಿಳಿಸಿದರು. ಈ ಸಂಧರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ ರೆಹ್ಮಾನ್ ಅಂದ್ರಾಜೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News