×
Ad

ಸಾಮಾಜಿಕ-ಆರ್ಥಿಕ ಸಮೀಕ್ಷಾ ವರದಿ ಬಿಡುಗಡೆ ನಿಶ್ಚಿತ: ಆಂಜನೇಯ

Update: 2017-07-16 20:36 IST

ಬೆಂಗಳೂರು, ಜು.16: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಬಿಡುಗಡೆ ನಿಶ್ಚಿತ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ ಕೈಗೊಳ್ಳಲಿದ್ದಾರೆಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ರವಿವಾರ ಗಾಂಧಿ ಕೃಷಿ ವಿಶ್ವವಿದ್ಯಾನಿಲಯ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸಾಮಾಜಿಕ-ಆರ್ಥಿಕ ಸಮೀಕ್ಷಾ ಬಗ್ಗೆ ಇದೀಗ ಜಾತಿಗ ವಿಂಗಡಣೆ ಕಾರ್ಯ ನಡೆಸಲಾಗುತ್ತದೆ. ಯಾವ ಜಾತಿಗೆ ಅನ್ಯಾಯವಾಗಿದೆ ಎಂದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಸಮೀಕ್ಷಾ ವರದಿ ಬಿಡುಗಡೆ ತಡೆ ಹಿಡಿಯುವಂತೆ ಯಾರೊಬ್ಬರೂ ಒತ್ತಡವನ್ನು ಹೇರಿಲ್ಲ. ಸಮೀಕ್ಷಾ ವರದಿಯನ್ನು ಇದೇ ವರ್ಷದಲ್ಲೇ ಬಿಡುಗಡೆ ಮಾಡಲಿದ್ದು, ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದ ಅವರು, ಸಾಮಾಜಿಕ-ಆರ್ಥಿಕ ಸಮೀಕ್ಷಾ ವರದಿ ಬಿಡುಗಡೆ ದೃಢನಿಶ್ಚಯ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News