ಕೆಪಿಸಿಸಿ ಕಾರ್ಯದರ್ಶಿಯಾಗಿ ಮಮತಾ ಗಟ್ಟಿ ಆಯ್ಕೆ
Update: 2017-07-17 16:01 IST
ಮಂಗಳೂರು, ಜು. 17: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ ಅವರು ಕರ್ನಾಟಕ ರಾಜ್ಯ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಮಮತಾ ಗಟ್ಟಿ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ, ದ.ಕ. ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಲ್ಲಿ ಎರಡು ಬಾರಿ ಅಧ್ಯಕ್ಷರಾಗಿ, ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
2006ರಿಂದ ಇಲ್ಲಿಯವರೆಗೆ ಮೂರು ಬಾರಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿ ಆಯ್ಕೆಗೊಂಡ ಅವರು, 2006ರಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಹುದ್ದೆಯಲ್ಲಿರುವ ಅವರು ಪ್ರಸ್ತುತ ಕೆಪಿಸಿಸಿ ಕಾರ್ಯದರ್ಶಿಯಾಗಿ ನೇಮಕ ಗೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.