×
Ad

ಸೀಟು ಹಂಚಿಕೆ ಫಲಿತಾಂಶ ಪ್ರಕಟ

Update: 2017-07-17 17:42 IST

ಬೆಂಗಳೂರು, ಜು.17: ಸಿಇಟಿ-2017ನೆ ಸಾಲಿನ ಎರಡನೆ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಾಧಿಕಾರದ ವೆಬ್‌ಸೈಟ್  http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮಗೆ ಹಂಚಿಕೆಯಾಗಿರುವ ವಿವರಗಳನ್ನು ಪರಿಶೀಲಿಸಬಹುದಾಗಿದೆ.

ಸೀಟು ಹಂಚಿಕೆಯ ಫಲಿತಾಂಶದ ಜೊತೆಯಲ್ಲಿ cut off ರ್ಯಾಂಕ್ ಅನ್ನು ನೋಡಬಹುದಾಗಿದೆ. ಸೀಟು ಹಂಚಿಕೆಯ ಫಲಿತಾಂಶವನ್ನು ಅಭ್ಯರ್ಥಿಗಳು ಸಿಇಟಿ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿದ ನಂತರ ನಿಗದಿಪಡಿಸಿರುವ ನಾಲ್ಕು CHOICE ಗಳಲ್ಲಿ ಯಾವುದಾದರೂ ಒಂದು CHOICE ಅನ್ನು ಆಯ್ಕೆ ಮಾಡುವ ಮೊದಲು ಈ ಕೆಳಗಿನ ಅಂಶಗಳನ್ನು ಗಮನಿಸುವಂತೆ ಸೂಚಿಸಲಾಗಿದೆ.

ರಾಜ್ಯ ಪರೀಕ್ಷಾ ಪ್ರಾಧಿಕಾರವು ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಮೊದಲನೆ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಅರ್ಹತೆಯನ್ನು ಹೊಂದಿದ್ದು, ಆಸಕ್ತಿಯಿರುವ ಅಭ್ಯರ್ಥಿಗಳು ಸೂಕ್ತವಾದ ಆಯ್ಕೆಯ ತೀರ್ಮಾನವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ.

ಆದುದರಿಂದ, ಎರಡನೆ ಸುತ್ತಿನಲ್ಲಿ ಹಂಚಿಕೆಯಾಗಿರುವ ಸೀಟುಗಳಿಗೆ ಯಾವುದೇ CHOICE ಅನ್ನು ಆಯ್ಕೆ ಮಾಡುವ ಮೊದಲು ಪ್ರತಿ CHOICEನ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ನಿರ್ಣಯಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

 ಬ್ರೋಚರ್‌ನಲ್ಲಿ ನೀಡಿರುವ ಮಾಹಿತಿಯನ್ನು ಓದಿ ಅರ್ಥ ಮಾಡಿಕೊಂಡು ಮುಂದಿನ ಸುತ್ತುಗಳಲ್ಲಿ ಭಾಗವಹಿಸಲು ನಿಗದಿಪಡಿಸಿರುವ ಅರ್ಹತೆ ಮತ್ತು ಮುಂದಿನ ಸುತ್ತುಗಳಲ್ಲಿ ಬರಬಹುದಾದ ಸೀಟುಗಳನ್ನು ಗಮನದಲ್ಲಿಟ್ಟುಕೊಂಡು ಪೋಷಕರ ಜೊತೆ ಚರ್ಚಿಸಿ, ಸೂಕ್ತವಾದ CHOICE ಅನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಿದೆ.

ಮುಂದುವರಿದ ಎರಡನೆ ಸುತ್ತಿನ ಫಲಿತಾಂಶ ಪ್ರಕಟಣೆಯ ನಂತರ ಅಭ್ಯರ್ಥಿಗಳಿಗೆ ಯಾವುದೆ CHOICE  ಅನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ಎರಡನೆ ಸುತ್ತಿನಲ್ಲಿ ಹಂಚಿಕೆಯಾದ ಕಾಲೇಜಿಗೆ ಕಡ್ಡಾಯವಾಗಿ ಪ್ರವೇಶವನ್ನು ಪಡೆಯಬೇಕಾಗುತ್ತದೆ. ಎರಡನೆ ಮುಂದುವರಿದ ಸುತ್ತಿನ ಪರಿಷ್ಕೃತ ವೇಳಾಪಟ್ಟಿಯನ್ನು ಸದ್ಯದಲ್ಲಿಯೆ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವುದು. ವಿವರವಾದ ಹೆಚ್ಚಿನ ಸೂಚನೆಗಳಿಗಾಗಿ ಅಭ್ಯರ್ಥಿಗಳು ವೆಬ್‌ಸೈಟ್‌ನ್ನು ನೋಡಬಹುದಾಗಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿಯು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News