×
Ad

ಉಡುಪಿ: 22ರಂದು ಅಡಿಗ ಜನ್ಮಶತಾಬ್ದಿ

Update: 2017-07-17 19:32 IST

ಉಡುಪಿ, ಜು.17: ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ಕನ್ನಡದ ನವ್ಯಕವಿ ಮೊಗೇರಿ ಗೋಪಾಲಕೃಷ್ಣ ಅಡಿಗರ ಜನ್ಮಶತಾಬ್ದಿಯನ್ನು ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜು.22ರ ಶನಿವಾರ ಅಪರಾಹ್ಣ 2:00 ಗಂಟೆಗೆ ಆಚರಿಸಲಾಗುವುದು.

ಉಡುಪಿ, ಜು.17: ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ಕನ್ನಡದ ನವ್ಯಕವಿ ಮೊಗೇರಿ ಗೋಪಾಲಕೃಷ್ಣ ಅಡಿಗರ ಜನ್ಮಶತಾಬ್ದಿಯನ್ನು ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜು.22ರ ಶನಿವಾರ ಅಪರಾಹ್ಣ 2:00 ಗಂಟೆಗೆ ಆಚರಿಸಲಾಗುವುದು. ಮೊಗೋಶ್ರೀ ವೇದಿಕೆ ಹಾಗೂ ಕಾಲೇಜಿನ ಕನ್ನಡ ವಿಭಾಗ ಜಂಟಿಯಾಗಿ ಆಯೋಜಿಸುವ ಈ ಕಾರ್ಯಕ್ರಮವನ್ನು ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದು, ಪ್ರಾಂಶುಪಾಲ ಡಾ. ಜಗದೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

 ಲೇಖಕರಾದ ಉಪ್ಪುಂದ ಚಂದ್ರಶೇಖರ ಹೊಳ್ಳ, ರಮೇಶ್ ವೈದ್ಯ, ಡಾ. ಚಂದ್ರಶೇಖರ್, ಪ್ರದೀಪ್‌ಕುಮಾರ್, ವೇ.ಮೂ. ಶಂಕರನಾರಾಯಣ ಅಡಿಗ ಮೊದಲಾದವರು ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ. ಕೊನೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕವಿಗಳಿಂದ ಸ್ವರಚಿತ ಕವನ ವಾಚನ ನಡೆಯಲಿದೆ ಎಂದು ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News