ನಾರ್ಯಗುತ್ತು ಜಯರಾಮ ಕೊಂಡೆ

Update: 2017-07-17 14:30 GMT

ಕೊಣಾಜೆ,ಜು.17: ನಾರ್ಯಗುತ್ತು ಜಯರಾಮ ಕೊಂಡೆ(75) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಹರೇಕಳ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸುಮಾರು 35 ವರ್ಷಗಳ ಕಾಲ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.  ಇವರು ಕಣಂತೂರು ಶ್ರೀ ತೋಡಕುಕ್ಕಿನಾರ್ ದೈವಸ್ಥಾನದ ಆಡಳಿತ ಮೊಕ್ತೇಸರರಾದ ನಾರ್ಯಗುತ್ತು ಯಜಮಾನ್ ಎಂ.ತಿಮ್ಮಪ್ಪ ಕೊಂಡೆ ಅವರ ಕಿರಿಯ ಸಹೋದರರಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ನಾರ್ಯಗುತ್ತು ಕುಟುಂಬಿಕರ ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಂ,ಕೃಷ್ಣ ರೈ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ