×
Ad

​ಜು.21 ರಂದು ಲಯನ್ಸ್ ಕ್ಲಬ್‌ನ ಶತಮಾನೋತ್ಸವ ಸಂಭ್ರಮ

Update: 2017-07-18 18:31 IST

ಬೆಂಗಳೂರು: ಜು. 18: ಲಯನ್ ಕ್ಲಬ್ ಜಿಲ್ಲೆ 317 ಎ ಪ್ರಾರಂಭವಾಗಿ ನೂರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಜು.21 ರಂದು ನಗರದ ಅರಮನೆ ಮೈದಾನದಲ್ಲಿ ಶತಮಾನೋತ್ಸವ ಸಂಭ್ರಮ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ಲಬ್ ಜಿಲ್ಲಾ ಗವರ್ನರ್ ಜಿ.ಪಿ.ದಿವಾಕರ್, ಬೆಂಗಳೂರು, ವೆುಸೂರು, ರಾಮನಗರ, ಮಂಡ್ಯ, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳ 120 ಕ್ಕೂ ಅಧಿಕ ಕ್ಲಬ್‌ಗಳು ಇದರ ಅಡಿಯಲ್ಲಿ ಕಳೆದ ನೂರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿವೆ. ಇವುಗಳ ಮೂಲಕ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ಡಾ.ನರೇಶ್ ಅಗರವಾಲ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದರು. ಇದೇ ವೇಳೆ ಜಿಲ್ಲಾ ಇನ್‌ಸ್ಟಾಲೇಷನ್ ಮತ್ತು ಕ್ಯಾಬಿನೆಟ್ ಪ್ರದರ್ಶನ ನಡೆಯಲಿದೆ. ಅಲ್ಲದೆ, ಹೊಸ ಸೇವಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News