ಹೂಡೆ: ಜಿಎಸ್‌ಟಿ ಕುರಿತು ಉಪನ್ಯಾಸ
Update: 2017-07-18 18:52 IST
ಉಡುಪಿ, ಜು.18: ತೋನ್ಸೆ ಹೂಡೆಯ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಜಿಎಸ್‌ಟಿ(ಸರಕು ಮತ್ತು ಸೇವಾ ತೆರಿಗೆ) ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಲೆಕ್ಕಪರಿಶೋಧಕ ಹಾಗೂ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಅತಿಥಿ ಉಪನ್ಯಾಸಕ ಕೃಷ್ಣ ಎಲ್.ಆಚಾರ್ಯ ಜಿಎಸ್‌ಟಿ ಕುರಿತು ಮಾಹಿತಿ ನೀಡಿದರು. ಬಳಿಕ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಸಂದೇಹಗಳಿಗೆ ಉತ್ತರ ನೀಡಿದರು.
ಟ್ರಸ್ಟ್‌ನ ಕಾರ್ಯದರ್ಶಿ ಜಿ.ಇಮ್ತಿಯಾಝ್, ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ, ಪ್ರಾಂಶುಪಾಲ ಡಾ.ಸಬೀನಾ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಭಾ ಬಾನು ಕಾರ್ಯಕ್ರಮ ನಿರೂಪಿಸಿದರು.