ರಸ್ತೆ ಅಪಘಾತ: ಗಾಯಾಳು ಮೃತ್ಯು
Update: 2017-07-18 19:55 IST
ವಿಟ್ಲ, ಜು. 18: ಮಂಗಳಪದವು ಎಂಬಲ್ಲಿ ಸೋಮವಾರ ನಡೆದ ಕಾರು ಮತ್ತು ಆಟೋ ರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಆಟೋ ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ವಿಟ್ಲ ಕಸಬಾ ಗ್ರಾಮದ ಅನ್ನಮೂಲೆ ನಿವಾಸಿ ರಮೇಶ (64) ಮೃತಪಟ್ಟ ಆಟೋ ಚಾಲಕ. ಇವರು ಜು.17 ರಂದು ತನ್ನ ಆಟೋ ರಿಕ್ಷಾದಲ್ಲಿ ವಿಟ್ಲ ಕಡೆಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ರಮೇಶ್ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯ ಗೊಂಡಿದ್ದರು. ಬಳಿಕ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.