ಸರಕಾರದ ಆದೇಶ ಪಾಲಿಸುತ್ತೇನೆ: ಡಿ.ರೂಪಾ
Update: 2017-07-18 19:58 IST
ಬೆಂಗಳೂರು, ಜು.18: ರಾಜ್ಯ ಸರಕಾರದ ಆದೇಶವನ್ನು ಪಾಲಿಸುತ್ತೇನೆ. ಇಲ್ಲಿ ಭಾವನೆಗಳ ಪ್ರಶ್ನೆ ಇಲ್ಲ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ನೂತನ ಆಯುಕ್ತರಾಗಿರುವ ಡಿ.ರೂಪಾ ಇಂದಿಲ್ಲಿ ಹೇಳಿದ್ದಾರೆ.
ಮಂಗಳವಾರ ಸಂಚಾರ ಹಾಗೂ ರಸ್ತೆ ಸುರಕ್ಷತಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಲು ಡಿಜಿ ಕಚೇರಿಗೆ ಆಗಮಿಸಿದ ಡಿ.ರೂಪಾ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರಕಾರದ ವರ್ಗಾವಣೆ ಆದೇಶವನ್ನು ಪಾಲಿಸುವುದು ನಮ್ಮ ಕರ್ತವ್ಯವೆಂದು ತಿಳಿಸಿದರು.
ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ತಮಗೆ ಬೆಂಬಲ ವ್ಯಕ್ತಪಡಿಸಿರುವುದಕ್ಕೆ ಡಿ.ರೂಪಾ ಧನ್ಯವಾದ ಸಲ್ಲಿಸಿದ್ದಾರೆ.