×
Ad

ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ

Update: 2017-07-18 22:31 IST

ಮಂಗಳೂರು, ಜು. 18: ನಗರದ ಖಾಸಗಿ ಆಸ್ಪತ್ರೆಯ ಭದ್ರತಾ ಸಿಬ್ಬಂದಿಯೊಬ್ಬರು ಬಾಲಕನೋರ್ವನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಾಟಿಪಳ್ಳದ ನಿವಾಸಿ ಅಬ್ದುಲ್ ಅರ್ಶದ್ (17) ಎಂಬಾತನಿಗೆ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಸೀತಾರಾಮ ಶೆಟ್ಟಿ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಕಳೆದ ವಾರ ಸುರತ್ಕಲ್‌ನಲ್ಲಿ ನಡೆದಿದ್ದ ಅಪಘಾತವೊಂದರಲ್ಲಿ ಅರ್ಶದ್‌ರ ತಾಯಿ ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಇವರನ್ನು ನೋಡಿಕೊಳ್ಳಲು ಅರ್ಶದ್ ಆಸ್ಪತ್ರೆಯಲ್ಲೇ ಇದ್ದರು. ಸೋಮವಾರ ರಾತ್ರಿ ಅರ್ಶದ್ ಮಲಗಲು ಬಂದ ಸಂದರ್ಭದಲ್ಲಿ ಸೀತಾರಾಮ ಶೆಟ್ಟಿ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ದೂರು ದಾಖಲಾಗಿಲ್ಲ ಎಂದು ಕದ್ರಿ ಠಾಣಾ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News