×
Ad

ಬಿಸಿಯೂಟ ಸೇವಿಸಿದ ಐದು ವಿದ್ಯಾರ್ಥಿಗಳು ಅಸ್ವಸ್ಥ

Update: 2017-07-19 18:17 IST

ತುಮಕೂರು, ಜು.19: ಗುಬ್ಬಿ ತಾಲೂಕಿನ ಪೆದ್ದನಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ವಾಂತಿ, ಹೊಟ್ಟೆನೋವು ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.

ಬಿಸಿಯೂಟ ಸೇವಿಸಿದ ಐದು ಮಂದಿ ವಿದ್ಯಾರ್ಥಿಗಳಿಗೆ ವಾಂತಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. 

ಮುಂಜಾಗ್ರತಾ ಕ್ರಮವಾಗಿ ಶಾಲೆಯ 39 ವಿದ್ಯಾರ್ಥಿ ಗಳಿಗೂ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News