ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ: ಸಚಿವ ಎಂ.ಬಿ.ಪಾಟೀಲ್
Update: 2017-07-19 19:40 IST
ಬೆಂಗಳೂರು, ಜು. 19: ಮಹದಾಯಿ ವಿವಾದ ಬಗೆಹರಿಸುವ ಸಂಬಂಧ ಬಿಜೆಪಿ ಮುಖಂಡರು, ಪ್ರಧಾನಿ ಮೋದಿಗೆ ಮನವರಿಕೆ ಮಾಡಿಕೊಡಬೇಕು. ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ಆ ಭಾಗದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಎಚ್ಚರಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಚಾರದಲ್ಲಿ ಕರ್ನಾಟಕ ರಾಜ್ಯ ತಪ್ಪು ದಾರಿಗೆ ಎಳೆಯುತ್ತಿದೆ ಎಂಬುದು ತಪ್ಪು. ನ್ಯಾಯಾಧಿಕರಣದ ಅಭಿಪ್ರಾಯವನ್ನು ಆಧರಿಸಿ ನಾವು ಮಧ್ಯಸ್ಥಿತಿ ವಹಿಸಲು ಮನವಿ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಪ್ರಧಾನಿ ಮೋದಿಯವರು ಕೂಡಲೇ ಮಧ್ಯಸ್ಥಿಕೆ ವಹಿಸಿ ವಿವಾದ ಇತ್ಯರ್ಥಕ್ಕೆ ಮುಂದಾಗಬೇಕು. ಈ ಹಿಂದೆ ತೆಲುಗು-ಗಂಗಾ ವಿಚಾರಕ್ಕೆ ಸಂಬಂಧಿಸಿದಂತೆ ಆಗಿನ ಪ್ರಧಾನಿ ಇಂದಿರಾ ಗಾಂಧಿ ಮಧ್ಯೆ ಪ್ರವೇಶ ಮಾಡಿ ನೀಡು ಬಿಡುಗಡೆ ಮಾಡಿಸಿದ್ದಾರೆ ಎಂದು ಸ್ಪಷ್ಟಣೆ ನೀಡಿದರು.