ವಿದ್ಯಾರ್ಥಿಗಳ ಹಾಜರಾತಿ ಬಗ್ಗೆ ಪೋಷಕರಿಗೆ ಮಾಹಿತಿ: ಸಚಿವ ತನ್ವೀರ್ ಸೇಠ್
Update: 2017-07-19 19:48 IST
ಬೆಂಗಳೂರು, ಜು. 19: ಸರಕಾರಿ ಮತ್ತು ಅನುದಾನಿತ ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಾಜರಾತಿ ಮಾಹಿತಿಯನ್ನು ಪೋಷಕರಿಗೆ ಕಳುಹಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಇಂದಿಲ್ಲಿ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಗೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಾಜರಾತಿ ಮಾಹಿತಿ ಪೋಷಕರಿಗೆ ರವಾನಿಸುವುದು ತಾಂತ್ರಿಕ ಯುಗದಲ್ಲಿ ಇದು ದೊಡ್ಡ ವಿಷಯವೇನೂ ಅಲ್ಲ ಎಂದು ಸ್ಪಷ್ಟಣೆ ನೀಡಿದರು.
ಹೆಚ್ಚು ಶುಲ್ಕ ಪಡೆಯುತ್ತಿರುವ ಖಾಸಗಿ ವಿದ್ಯಾ ಸಂಸ್ಥೆಗಳ ಬಗ್ಗೆ ಈಗಾಗಲೇ ಪೋಷಕರಿಗೆ ಮಾಹಿತಿ ರವಾನೆ ಮಾಡಲಾಗುತ್ತಿದೆ ಎಂದ ಅವರು, ವಿದ್ಯಾರ್ಥಿಗಳ ಹಾಜರಾತಿ ಮಾಹಿತಿಯನ್ನು ಪೋಷಕರಿಗೆ ರವಾನಿಸುವ ಚಿಂತನೆ ಇದೆ ಎಂದು ಪ್ರತಿಕ್ರಿಯೆ ನೀಡಿದರು.