×
Ad

ನಿವೃತ್ತಿ ಅಧಿಕಾರಿಗಳ ಮರು ನೇಮಕಕ್ಕೆ ಖಂಡನೆ

Update: 2017-07-19 19:52 IST

ಬೆಂಗಳೂರು, ಜು. 19: ನಿವೃತ್ತ ಅಧಿಕಾರಿಗಳನ್ನು ವಿವಿಧ ಇಲಾಖೆಗಳಿಗೆ ಮರು ನೇಮಿಸುವ ಮೂಲಕ ಸರಕಾರ ಕಾನೂನನ್ನು ಉಲ್ಲಂಘಿಸಿದೆ ಎಂದು ರಾಜ್ಯ ಸರಕಾರ ಹಾಗೂ ಸರಕಾರಿ ಸ್ವಾಮ್ಯ ಸಂಘ ಸಂಸ್ಥೆಗಳ ವಾಹನ ಚಾಲಕರ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಆರೋಪಿಸಿವೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಂ.ಎನ್. ವೇಣುಗೋಪಾಲ್, ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ವಿವಿಧ ಇಲಾಖೆಗಳಿಂದ ನಿವೃತ್ತಿ ಹೊಂದಿದ 32 ಮಂದಿ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಮರು ನೇಮಕ ಮಾಡಿ, ಅವರಿಗೆ ನಿವೃತ್ತಿ ವೇತನದ ಜೊತೆಗೆ ಗುತ್ತಿಗೆ ವೇತನ ನೀಡಲಾಗುತ್ತಿದೆ. ಇದರಿಂದಾಗಿ ಸರಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ ಎಂದು ದೂರಿದರು.
ಸರಕಾರದಿಂದ ಎರಡೆರಡು ವೇತನ ನೀಡಲಾಗುತ್ತಿದೆ. ಅಷ್ಟೇ ಅಲ್ಲದೆ, ನಿವೃತ್ತಿಯಾದವರಿಗೆ 10-20 ಲಕ್ಷ ಬೆಲೆ ಬಾಳುವ ವಾಹನಗಳನ್ನು ನೀಡಿದ್ದು, ಸರಕಾರದ ಹಣದಿಂದ ಇವುಗಳನ್ನು ನಿಯಂತ್ರಿಸಲಾಗುತ್ತಿದೆ. ಸರಕಾರದ ಆದೇಶಗಳನ್ನು ಗಾಳಿಗೆ ತೂರಿ ಕಾನೂನು ಉಲ್ಲಂಘಿಸಿ ಸರಕಾರದ ವಾಹನಗಳನ್ನು ಮನೆಯಲ್ಲಿಯೇ ನಿಲ್ಲಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಸರಕಾರದ ವಾಹನವನ್ನು ಸ್ವಂತ ಬಳಕೆ ಮಾಡಿಕೊಳ್ಳುತ್ತಿದ್ದಾರ ಎಂಬ ಅನುಮಾನ ಮೂಡುತ್ತಿದೆ ಎಂದು ಸಂಶಯ ವ್ಯಕ್ತಪಡಿಸಿದರು.
 
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಶೇ. 86ರಷ್ಟು ಹೊರ ರಾಜ್ಯದವರು ತುಂಬಿಕೊಂಡಿದ್ದಾರೆ ಎಂದ ಅವರು, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯೂ ಇತ್ತೀಚೆಗಷ್ಟೆ 20 ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಲು ಅರ್ಜಿ ಆಹ್ವಾನಿಸಿತ್ತು. ಅದರಲ್ಲಿಯೂ ನಿವೃತ್ತ ಸರ್ಕಾರಿ ನೌಕರರಿಗೆ ಆದ್ಯತೆ ನೀಡಲಾಗಿದೆ. ಇದ್ದಾರೆ. ಇದರಿಂದಾಗಿ ರಾಜ್ಯ ಹಲವಾರು ವಿದ್ಯಾವಂತ ನಿರುದ್ಯೋಗಿಗಳು ಉದ್ಯೋಗ ವಂಚಿತರಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಷನಲ್ ೆಡೆರೇಷನ್ ಆ್ ಇಂಡಿಯನ್ ವುಮನ್ ಅಧ್ಯಕ್ಷೆ ಕೆ.ಕೆ. ಸುಮಿತ್ರಾ ಮಾತನಾಡಿ, 1977ರಿಂದಲೂ ಇಂತಹ ಪ್ರಕರಣಗಳು ನಡೆಯುತ್ತಿವೆ. ಸರಕಾರಕ್ಕೆ ಈ ವಿಷಯ ತಿಳಿದಿದ್ದರೂ, ಕ್ರಮ ಕೈಗೊಳ್ಳುವುದರ ಬದಲಿಗೆ ಮೌನವಾಗಿದೆ. ಈ ಮೂಲಕ ಭ್ರಷ್ಟಚಾರಕ್ಕೆ ಬೆಂಬಲ ನೀಡುತ್ತಿದೆ. ಹೀಗಾಗಿ ನಿವೃತ್ತ ಅಧಿಕಾರಿಗಳನ್ನು ಕೆಲಸದಿಂದ ತೆಗೆದು, ಹೊಸ ನೇಮಕಾತಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಭ್ರಷ್ಟಾಚಾರ ವೇದಿಕೆ ಅಧ್ಯಕ್ಷ ರಾಮಲಿಂಗಾರೆಡ್ಡಿ, ರಾಷ್ಟ್ರೀಯ ಚಿಂತಕರ ವೇದಿಕೆ ಅಧ್ಯಕ್ಷ ರವಿಚಂದ್ರ, ಕೆ.ರಾಮಕೃಷ್ಣ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News