×
Ad

ಬೈಕಿ ಢಿಕ್ಕಿ: ಸೈಕಲ್ ಸವಾರ ಮೃತ್ಯು

Update: 2017-07-19 21:45 IST

ಮಂಡ್ಯ, ಜು.19: ಬೈಕ್ ಢಿಕ್ಕಿ ಹೊಡೆದು ಸೈಕಲ್  ಸವಾರ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಚೋಳನಹಳ್ಳಿ ಬಳಿ ಬುಧವಾರ ಬೆಳಗ್ಗೆ ನಡೆದಿದೆ.
ಮಳವಳ್ಳಿ ಪಟ್ಟಣದ ಪೇಟೆ ಬೀದಿ ನಿವಾಸಿ ನಾಗಣ್ಣ(65) ಮೃತ ಸೈಕಲ್ ಸವಾರ.

ಇವರು ತಮ್ಮ ಜಮೀನಿಗೆ ಸೈಕಲ್‌ನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಹಲಗೂರು ಕಡೆಯಿಂದ ಬೈಕ್‌ನಲ್ಲಿ ಬರುತ್ತಿದ್ದ ವ್ಯಕ್ತಿ ಢಿಕ್ಕಿಯೊಡೆದು ತೀವ್ರವಾಗಿ ಗಾಯಗೊಂಡ ನಾಗಣ್ಣ ಅವರಿಗೆ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News