×
Ad

ರೈತ ಆತ್ಮಹತ್ಯೆ

Update: 2017-07-19 21:53 IST

ಕೃಷ್ಣರಾಜಪೇಟೆ, ಜು.19: ಪಟ್ಟಣದ ಅಗ್ರಹಾರ ಬಡಾವಣೆಯ ನಿವಾಸಿ ರುದ್ರೇಗೌಡರ ಪುತ್ರ, ಪ್ರಗತಿಪರ ರೈತ ಶಂಕರ(35) ಸಾಲಬಾಧೆ ತಾಳಲಾರದೆ ಕ್ರಿಮಿನಾಶಕದ ಗುಳಿಗೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳವಾರ ತಡರಾತ್ರಿ ಊಟದ ಜೊತೆಯಲ್ಲಿ ಕ್ರಿಮಿನಾಶಕ ಮಾತ್ರೆ ಸೇವಿಸಿ ಅಸ್ವಸ್ಥಗೊಂಡ ಶಂಕರ್ ಅವರನ್ನು ಮೈಸೂರಿನ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಮೃತಪಟ್ಟರು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
 ಮಾತ್ರೆಯನ್ನು ಸೇವಿಸಿ ಒದ್ದಾಡುತ್ತಿದ್ದ ರೈತ ಶಂಕರ್ ಅವರನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಯಿತಾದರೂ ಇಂದು ಮುಂಜಾನೆ ಚಿಕಿತ್ಸೆಯು ಫಲಕಾರಿಯಾಗದೇ ಶಂಕರ್ ಮೃತರಾದರು.

ಎರಡು ಎಕರೆ ಭೂಮಿಯಲ್ಲಿ ಬೇಸಾಯ ಮಾಡುತ್ತಿದ್ದ ಶಂಕರ್, ಕೃಷಿಗಾಗಿ ಕಸಬಾ ಕೃಷಿ ಉತ್ಪನ್ನ ಸಹಕಾರ ಸಂಘದಿಂದ ಒಂದು ಲಕ್ಷ ರೂ. ಹಾಗೂ 3 ಲಕ್ಷ ರೂ. ಕೈಸಾಲ ಮಾಡಿಕೊಂಡಿದ್ದರೆಂದು ಹೇಳಲಾಗಿದೆ.
ಮೃತರು ಪತ್ನಿ ಪವಿತ್ರ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News