ಭಾರತದ 14ನೆ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಆಯ್ಕೆ

Update: 2017-07-20 11:02 GMT

ಹೊಸದಿಲ್ಲಿ, ಜು.20: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ರಾಮನಾಥ್ ಕೋವಿಂದ್ ಭಾರತದ 14ನೆ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

 ರಾಷ್ಟ್ರಪತಿ ಆಯ್ಕೆಗಾಗಿ ನಡೆದಿದ್ದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಗ್ಗೆ ಆರಂಭವಾಗಿದ್ದು, ಯುಪಿಎ ಬೆಂಬಲಿತ ಅಭ್ಯರ್ಥಿ ಮೀರಾಕುಮಾರ್‌ರನ್ನು 3,34, 730 ಮತಗಳ ಅಂತರದಿಂದ ಮಣಿಸಿದ ಕೋವಿಂದ್ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ಕೋವಿಂದ್ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆಂದು ಕೇಂದ್ರ ಚುನಾವಣಾ ಆಯೋಗ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.

ರಾಮನಾಥ್ ಕೋವಿಂದ್ ಒಟ್ಟು 7,02, 044 ಮತಗಳನ್ನು ಪಡೆದರೆ, ಮೀರಾಕುಮಾರ್ 3,67,314 ಮತಗಳನ್ನು ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News