×
Ad

ಗಣಿಗಾರಿಕೆ ಸ್ಥಗಿತಗೊಳಿಸಲು ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ

Update: 2017-07-20 20:08 IST

ಬೆಂಗಳೂರು, ಜು.20: ಮಡಿಕೇರಿಯ ಅಂದುಗೋವೆ ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕು. ಗ್ರಾನೈಟ್‌ನ್ನು ಸ್ಥಳಾಂತರಿಸಬಾರದು ಹಾಗೂ ಜಮೀನಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸೂಚಿಸಿ ಕೊಡಗು ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸ್ಕಂದ ಗ್ರಾನೈಟ್‌ಗೆ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
 
ಈ ಸಂಬಂಧ ಸ್ಕಂದ ಗ್ರಾನೈಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು. ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರ ಸೂಚನೆಯ ಮೇರೆಗೆ ಸೋಮವಾರಪೇಟೆ ತಾಲೂಕಿನ ಅಂದಗೋವೆ ಗ್ರಾಮದ ಸರ್ವೇ ನಂಬರ್ 81/4ರಲ್ಲಿ 2 ಎಕರೆ ಪ್ರದೇಶದಲ್ಲಿ ನಡೆಸುತ್ತಿರುವ ಕಲ್ಲು ಗಾಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕು. ಗ್ರಾನೈಟ್‌ನ್ನು ಸ್ಥಳಾಂತರಿಸಬಾರದು ಹಾಗೂ ಜಮೀನಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸೂಚಿಸಿ ಕೊಡಗು ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸ್ಕಂದ ಗ್ರಾನೈಟ್‌ಗೆ ನೋಟಿಸ್ ನೀಡಿದ್ದರು.

ಈ ನೋಟಿಸ್‌ನ್ನು ಪ್ರಶ್ನಿಸಿ ಸ್ಕಂದ ಗ್ರಾನೈಟ್‌ನವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಗುರುವಾರ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ವಿಭಾಗೀಯ ನ್ಯಾಯಪೀಠವು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸ್ಕಂದ ಗ್ರಾನೈಟ್‌ಗೆ ನೀಡಿದ್ದ ನೋಟಿಸ್‌ಗೆ ಮಧ್ಯಂತರ ತಡೆ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News