ಮೂಡುಬಿದಿರೆ: 24, 25ರಂದು ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ

Update: 2017-07-20 16:47 GMT

ಮಂಗಳೂರು, ಜು. 20: ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ (ಸಿಐಟಿಯು) ತನ್ನ 9ನೆ ರಾಜ್ಯ ಸಮ್ಮೇಳನವನ್ನು ಜು. 24 ಮತ್ತು 25 ರಂದು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ.

ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷರಾಗಿ ಕೆ.ಯಾದವ ಶೆಟ್ಟಿ ಹಾಗೂ ಅಧ್ಯಕ್ಷರಾಗಿ ರಮಣಿ ಮೂಡಬಿದರೆ ಆಯ್ಕೆಗೊಂಡಿದ್ದಾರೆ. ಆಲ್ ಇಂಡಿಯಾ ಬೀಡಿ ವರ್ಕರ್ಸ್ ಫೆಡರೇಶನ್ (ಸಿಐಟಿಯು)ನ ಪ್ರಧಾನ ಕಾರ್ಯದರ್ಶಿ ಕಾ.ದೇವಾಶೀಸ್ ರಾಯ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ಕರ್ನಾಟಕ ರಾಜ್ಯ ಸಿಐಟಿಯು ಅಧ್ಯಕ್ಷ ಎಸ್.ವರಲಕ್ಷ್ಮಿ, ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್‌ನ ಕಾರ್ಯದರ್ಶಿ ಸೈಯ್ಯದ್ ಮುಜೀಬ್, ದ.ಕ.ಜಿಲ್ಲಾ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಜೆ.ಬಾಲಕೃಷ್ಣ ಶೆಟ್ಟಿ, ಹಿರಿಯ ಕಾರ್ಮಿಕ ಮುಖಂಡ ಕೆ.ಆರ್.ಶ್ರೀಯಾನ್, ಸಿಐಟಿಯು ಜಿಲ್ಲಾ ಸಮಿತಿ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮುಖ್ಯ ಅತಿಥಿಗಳಾಗಿ ಉದ್ಘಾಟನಾ ಭಾಗವಹಿಸಲಿದ್ದಾರೆ.

ರಾಜ್ಯ ಬೀಡಿ ಕಾರ್ಮಿುಕರ ಫೆಡರೇಶನ್‌ನ ಉಪಾಧ್ಯಕ್ಷ ಪದ್ಮಾವತಿ ಶೆಟ್ಟಿ ಸಭೆಯ ಅಧ್ಯಕ್ಷತೆ ವಸಲಿರುವರು.ಜು.24ರ ಅಪರಾಹ್ನ 3 ಗಂಟೆಗೆ ‘ಬೀಡಿ ಉದ್ದಿಮೆ ಮತ್ತು ಕಾರ್ಮಿಕರ ಸಮಸ್ಯೆಗಳು’ ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಇದಕ್ಕೂ ಮುನ್ನ ಬೀಡಿ ಕಾರ್ಮಿಕರ ರ್ಯಾಲಿಯು ಮೂಡುಬಿದಿರೆ ಹಳೇ ಪೊಲೀಸ್ ಠಾಣೆಯ ಬಳಿಯಿಂದ ಸಮ್ಮೇಳನ ನಡೆಯಲಿರುವ ಸಮಾಜ ಮಂದಿರೆದವರೆಗೆ ಸಾಗಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಯಾದವ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News