ಆಳ್ವಾಸ್ ಪದವಿಪೂರ್ವ ಕಾಲೇಜು ಎನ್‌ಎಸ್‌ಎಸ್ ಉದ್ಘಾಟನೆ

Update: 2017-07-20 17:03 GMT

ಮೂಡುಬಿದಿರೆ, ಜು. 20: ಆಳ್ವಾಸ್ ಪದವಿಪೂರ್ವ ಕಾಲೇಜಿನ 2017-18ನೆ ಸಾಲಿನ ಎನ್‌ಎಸ್‌ಎಸ್ ಘಟಕವನ್ನು ಪುತ್ತಿಗೆ ಪದವಿನಲ್ಲಿರುವ ಆಳ್ವಾಸ್ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಉದ್ಘಾಟಿಸಲಾಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಎನ್‌ಎಸ್‌ಎಸ್ ಘಟಕವನ್ನು ಉದ್ಘಾಟಿಸಿ, ಶಿಕ್ಷಣ ಎನ್ನುವುದು ವಿದ್ಯಾರ್ಥಿಗಳಲ್ಲಿರುವ ಅಮೂಲ್ಯ ಅಸ್ತ್ರ. ಸಮಾಜಮುಖಿಯಾಗಿ ಅದನ್ನು ಬಳಸಿದಾಗ, ಅದು ಸದುಪಯೋಗವಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯಿಂದ ಸಮಾಜಮುಖಿ ಚಿಂತನೆ ಬೆಳೆಯುತ್ತದೆ. ವಿದ್ಯಾರ್ಥಿಗಳು ಸಮನಸ್ಸು ಹಾಗೂ ಶಿಸ್ತಿನ ಜೀವನ ನಡೆಸಿದರೆ, ಅವರನ್ನು ಉತ್ತಮ ವಿದ್ಯಾರ್ಥಿಗಳನ್ನಾಗಿ ರೂಪಿಸುತ್ತದೆ ಎಂದು ಅಭಿಪ್ರಾಯಪಟ್ಟರು.

 ಆಳ್ವಾಸ್ ಪ.ಪೂ ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್ ಶೆಟ್ಟಿ ಎಚ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಳ್ವಾಸ್ ಪಿಯು ಕಾಲೇಜಿನ ಆಡಳಿತಾಧಿಕಾರಿ ಅಭಿನಂದನ್ ಶೆಟ್ಟಿ, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಅರುಣ್ ಕುಮಾರ್ ಸ್ವಾಗತಿಸಿದರು.ರಾಮಕೃಷ್ಣ ಹೆಗ್ಡೆ ವಂದಿಸಿದರು. ಚೈತ್ರಾ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News