ಗ್ರೀಕ್ ಕೋಸ್ ಐಲ್ಯಾಂಡ್ ನಲ್ಲಿ ಭೂಕಂಪ; 2 ಸಾವು, 120ಕ್ಕೂ ಅಧಿಕ ಮಂದಿಗೆ ಗಾಯ

Update: 2017-07-21 05:29 GMT

ಕೋಸ್ , ಜು.21: ಗ್ರೀಕ್ ಕೋಸ್  ಐಲ್ಯಾಂಡ್ ನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೂಕಂಪದಿಂದಾಗಿ ಬಂದರು, ಹಲವು ಕಟ್ಟಡಗಳಿಗೆ ಹಾನಿಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. 120ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 

ಗಾಯಗೊಂಡಿರುವ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿದೆ.

ಭೂಕಂಪದಿಂದಾಗಿ ಮನೆಯೊಳಗೆ ಸಿಲುಕಿಕೊಂಡಿರುವ ಜನರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

ಭೂಕಂಪದಿಂದಾಗಿ ಹಳೆಯ ಕಟ್ಟಡಗಳಿಗೆ  ಹೆಚ್ಚು ಹಾನಿಯಾಗಿದೆ. ಕೆಲವು ಕಟ್ಟಡಗಳು ಬಿರುಕು ಬಿಟ್ಟಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News