×
Ad

ಕೆಎಸ್ಸಾರ್ಟಿಸಿಗೆ ಇಂಡಿಯಾ-2017 ಪ್ರಶಸ್ತಿ

Update: 2017-07-21 20:57 IST

ಬೆಂಗಳೂರು, ಜು.21: ಕೆಎಸ್ಸಾರ್ಟಿಸಿ ‘ಎಂಐಟಿಆರ್‌ಎ’ (ಮೈಸೂರ್ ಇಂಟಲಿಜೆಂಟ್ಸ್ ಟ್ರಾನ್ಸ್‌ಪೋರ್ಟ್ ಸಿಸ್ಟಮ್) ವ್ಯವಸ್ಥೆಯನ್ನು ಜಾರಿ ಮಾಡಿದ್ದಕ್ಕಾಗಿ ಪ್ರತಿಷ್ಠಿತ ‘ಪ್ರಾಜೆಕ್ಟ್ ಮ್ಯಾನೆಜ್‌ಮೆಂಟ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ-2017 ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ನಿಮಾನ್ಸ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕೆಎಸ್ಸಾರ್ಟಿಸಿಯ ನಿರ್ದೇಶಕ ಬಿಎನ್‌ಎಸ್ ರೆಡ್ಡಿಗೆ ಪ್ರೆಜೆಕ್ಟ್ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ರಾಜ್ ಕಲಾಡಿ ಪ್ರಶಸ್ತಿ ಪ್ರದಾನ ಮಾಡಿದರು.
ಸರಕಾರಿ ಸ್ವಾಮ್ಯದ ಸಂಸ್ಥೆಗಳು ಹೊಸ ಹೊಸ ಯೋಜನೆಗಳನ್ನು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಯಶಸ್ವಿಯಾಗಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News