ಜು. 22: ಪದಗ್ರಹಣ ಸಮಾರಂಭ, ಕ್ಲಬ್ ಉದ್ಘಾಟನೆ
Update: 2017-07-21 21:51 IST
ಮಂಗಳೂರು, ಜು. 21: ಸುರತ್ಕಲ್ ಕೃಷ್ಣಾಪುರದ ಅಲ್ ಬದ್ರಿಯಾ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಪದಗ್ರಹಣ ಸಮಾರಂಭ ಮತ್ತು ಕ್ಲಬ್‌ಗಳ ಉದ್ಘಾಟನಾ ಕಾರ್ಯಕ್ರಮವು ಜು. 22ರಂದು ಬೆಳಗ್ಗೆ 10 ಗಂಟೆಗೆ ಚೊಕ್ಕಬೆಟ್ಟು ಎಂ.ಜೆ.ಎಂ.ಸಭಾಂಗಣದಲ್ಲಿ ನಡೆಯಲಿದೆ.
ಅಲ್‌ಬದ್ರಿಯಾ ಎಜುಕೇಶನಲ್ ಅಸೋಸಿಯೇಶನ್‌ನ ಅಧ್ಯಕ್ಷ ಅಬೂಬಕರ್ ಕೃಷ್ಣಾಪುರ ಅಧ್ಯಕ್ಷತೆ ವಹಿಸಲಿದ್ದಾರೆ. ಕೃಷ್ಣಾಪುರ 7ನೆ ವಿಭಾಗದ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಬಿ.ಎಂ.ಹಸೇನ್ ಭಾಗವಹಿಸಲಿದ್ದಾರೆ.
ದ.ಕ. ಜಿಲ್ಲಾ ಕನ್ಸುಮರ್ ಫೆಡರೇಶನ್‌ನ ಅಧ್ಯಕ್ಷ ಎಂ.ಜೆ.ಸಾಲಿಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.