×
Ad

ಫೈನಲ್ ಗೂ ಮುನ್ನ ಭಾರತೀಯ ಮಹಿಳಾ ತಂಡಕ್ಕೆ ಬಂಪರ್ ಕೊಡುಗೆ ಘೋಷಿಸಿದ ಬಿಸಿಸಿಐ

Update: 2017-07-22 20:48 IST

ಹೊಸದಿಲ್ಲಿ, ಜು.22: ಮಹಿಳಾ ಕ್ರಿಕೆಟ್ ವಿಶ್ವಕಪ್ 2017 ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಭಾರತೀಯ ತಂಡದ ಪ್ರತಿಯೊಬ್ಬ ಸದಸ್ಯರಿಗೂ ಬಿಸಿಸಿಐ 50 ಲಕ್ಷ ರೂ. ಬಹುಮಾನ ಘೋಷಿಸಿದೆ.

ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಜಯಿಸಿ ಫೈನಲ್ ಪ್ರವೇಶಿಸಿದ ಮಿಥಾಲಿ ರಾಜ್ ನಾಯಕತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಇತರ ಸಹಾಯಕ ಸಿಬ್ಬಂದಿಗೂ 25 ಲಕ್ಷ ರೂ. ನೀಡುವುದಾಗಿ ಬಿಸಿಸಿಐ ಘೋಷಿಸಿದೆ.

ಸೆಮಿಫೈನಲ್ ಪಂದ್ಯದಲ್ಲಿ ಆಲ್ ರೌಂಡರ್ ಹರ್ಮನ್ ಪ್ರೀತ್ ಕೌರ್ 20 ಬೌಂಡರಿ ಹಾಗೂ 7 ಸಿಕ್ಸರ್ ಮೂಲಕ 171 ರನ್ ಗಳಿಸಿದ್ದರು. ಫೈನಲ್ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡನ್ನು ಎದುರಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News