×
Ad

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಾಲೂಕು ಭೇಟಿ

Update: 2017-07-22 20:54 IST

ಮಂಗಳೂರು, ಜು.22: ದ.ಕ.ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬೆಳ್ತಂಗಡಿ, ಬಂಟ್ವಾಳ, ವಿಟ್ಲ ಮತ್ತು ಪುತ್ತೂರು ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ.

ಜು.24ರಂದು ಪೂ.11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2:30ರಿಂದ ಸಂಜೆ 4:30 ಗಂಟೆಯವರೆಗೆ ಬಂಟ್ವಾಳ ನಿರೀಕ್ಷಣಾ ಮಂದಿರ, ಜು.29ರಂದು ಪೂ.11 ಗಂಟೆಯಿಂದ ಮಧ್ಯಾಹ್ನ 1ರವರೆಗೆ ವಿಟ್ವ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2:30ರಿಂದ ಸಂಜೆ 4:30 ಗಂಟೆಯವರೆಗೆ ಪುತ್ತೂರು ನಿರೀಕ್ಷಣಾ ಮಂದಿರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪೊಲೀಸ್ ಉಪಾಧೀಕ್ಷಕರು, ಎಸಿಬಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News