ಬಿಎಸ್‌ವೈ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು

Update: 2017-07-22 15:40 GMT

ಬೆಂಗಳೂರು, ಜು.22: ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಪಿಎ ವಿನಯ್ ಅವರ ಕಿಡ್ನಾಪ್‌ಗೆ ಮಾಸ್ಟರ್ ಮೈಂಡ್ ಎಂದು ಹೇಳಲಾಗುತ್ತಿರುವ ಎಂ.ಆರ್.ಸಂತೋಶ್ ವಿರುದ್ಧದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಬೇಕೆಂದು ಪೊಲೀಸ್ ಆಯುಕ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ವಕೀಲ ಅಮೃತೇಶ್ ಅವರು ಪೊಲೀಸ್ ಆಯುಕ್ತರಿಗೆ ಬಿಎಸ್‌ವೈ ವಿರುದ್ಧ ದೂರು ದಾಖಲಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರು ಎಂ.ಆರ್.ಸಂತೋಷ್ ತಮಗೆ ಏಳು ವರ್ಷದಿಂದ ಪರಿಚಯಸ್ಥರು ಎಂದು ಹೇಳಿಕೊಳ್ಳುತ್ತಿದ್ದಾರೆ. ಹಾಗೆಯೇ ಅವರ ವಿರುದ್ಧದ ತನಿಖೆ ನಿಷ್ಪಕ್ಷಪಾತವಾಗಿ ಇರಬೇಕೆಂದು ಹೇಳುತ್ತಲೇ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ತನಿಖೆಯಾಗದಂತೆ ಪ್ರಭಾವ ಬೀರುತ್ತಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಒಳಸಂಚು ರೂಪಿಸುತ್ತಿದ್ದಾರೆ. ಒಬ್ಬ ಮಾಜಿ ಮುಖ್ಯಮಂತ್ರಿಯೇ ಖುದ್ದಾಗಿ ಆರೋಪಿಯನ್ನು ರಕ್ಷಿಸಲು ಮುಂದಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಮೃತೇಶ್ ಅವರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.
   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News