ಹೈಕೋರ್ಟ್ ಆದೇಶ ಪಾಲಿಸದ ಐವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
Update: 2017-07-22 21:40 IST
ಬೆಂಗಳೂರು, ಜು.22: ಹೈಕೋರ್ಟ್ ಆದೇಶ ಪಾಲಿಸದ ಹಾಗೂ ಕರ್ತವ್ಯ ಲೋಪ ಎಸಗಿದ ಆರೋಪದಡಿ ಐವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಎಸಿ ಡಿ.ಬಿ ನಟೇಶ್, ತಹಶಿಲ್ದಾರ್ ಶಿವಕುಮಾರ್, ಜಿಲ್ಲಾಧಿಕಾರಿ ಶಂಕರ್, ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಮಣ ರೆಡ್ಡಿ ವಿರುದ್ಧ ಎ. ವೆಂಕಟೇಶ್‌ಗೌಡ ಎಂಬುವವರು ಜೂ.14 ರಂದು ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಿಸಿದ್ದಾರೆ. ಎಸಿ ಡಿಬಿ ನಟೇಶ್ ಹಾಗೂ ತಹಶಿಲ್ದಾರ ಶಿವಕುಮಾರ್ ಅಮಾನತಿಗೆ ಹೈಕೋರ್ಟ್ ಆದೇಶ ನೀಡಿತ್ತು. ಆದರೆ, ಇದುವರೆಗೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಲಿಲ್ಲ ಎಂದು ಆರೋಪಿಸಿ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಮಣ ರೆಡ್ಡಿ ಹಾಗೂ ಜಿಲ್ಲಾಧಿಕಾರಿ ಶಂಕರ್ ಸೇರಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.