ಮಜ್ದೂರ್ ಕಾಂಗ್ರೆಸ್ ಸಂಘಟನೆಗೆ ಮುದ್ದಪ್ಪ ಕರೆ
ಮಂಡ್ಯ, ಜು.23: ಮಜ್ದೂರ್ ಕಾಂಗ್ರೆಸ್ ಹಾಗೂ ಕಾರ್ಮಿಕ ಕಾಂಗ್ರೆಸ್ ಎರಡೂ ಸಂಘಟನೆಗಳು ಮಾತೃ ಪಕ್ಷವಾದ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡುವಂತಹುದು. ಅದ್ದರಿಂದ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಬೇಡ. ಎರಡೂ ಘಟಕಗಳನ್ನು ಒಟ್ಟಾಗಿ ನಡೆಸಿಕೊಂಡು ಹೋಗುವಂತಹ ಪ್ರಯತ್ನವನ್ನು ಮಾಡಲಾಗುವುದು ಎಂದು ರಾಜ್ಯ ಮಜ್ದೂರ್ ಕಾಂಗ್ರೆಸ್ ವಿಭಾಗದ ಉಪಾಧ್ಯಕ್ಷ ಮುದ್ದಪ್ಪ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಮಜ್ದೂರ್ ಕಾಂಗ್ರೆಸ್ ವತಿಯಿಂದ ರವಿವಾರ ಕಾರ್ಯಕರ್ತರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, 1905ರಲ್ಲೇ ಪ್ರಾರಂಭವಾದ ಮಜ್ದೂರ್ ಕಾಂಗ್ರೆಸ್‍ನಲಿ ್ಲ ಹಲವು ಸ್ವಾತಂತ್ರ್ಯ ಹೋರಾಟಗಾರರು ಮುನ್ನಡೆಸಿದ್ದಾರೆ. ರಾಜ್ಯದಲ್ಲಿ 8 ಲಕ್ಷ ಮಂದಿ ಈ ವಿಭಾಗದಲ್ಲಿ ಸಂಘಟನೆ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ ಬಡವರ, ಕೃಷಿ ಕೂಲಿಕಾರರ ಪರವಾಗಿರುವಂತಹ ಪಕ್ಷ. ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಅಸಂಘಟಿತ ಕಾರ್ಮಿಕರನ್ನು ಗುರಿಯಾಗಿಟ್ಟುಕೊಂಡು ಮಜ್ದೂರ್ ಕಾಂಗ್ರೆಸ್ ಸಂಘಟನೆ ಮಾಡಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಆತ್ಮಾನಂದ ಮಾತನಾಡಿ, ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಮಜ್ದೂರ್ ಕಾಂಗ್ರೆಸ್ ಕಾರ್ಯಕ್ರಮಗಳನ್ನು ರೂಪಿಸಬೇಕು. ಸರಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾ ಮಜ್ದೂರ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಸುದರ್ಶನ್, ಉಪಾಧ್ಯಕ್ಷ ಶಿವಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಎನ್.ಪಳನಿ, ಜಿ.ಪಿ.ಸಿದ್ದೇಗೌಡ, ಝಾಕೀರ್ ಅಹಮದ್, ಮಹದೇವು ಇತರರು ಉಪಸ್ಥಿತರಿದ್ದರ